ಉದಯವಾಹಿನಿ, ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಗ್ರೀಮ್ ಥಿಯೇಟರ್’ ಚಿತ್ರದಲ್ಲಿ ಬಹುಭಾಷಾ ನಟಿ ಅದಿತಿ ಬಾಲನ್ ‘ಏಜೆಂಟ್ ಕಾವೇರಿ’ಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಅರುವಿ’, ‘ಕುಟ್ಟಿ ಸ್ಟೋರಿ’, ‘ಕೋಲ್ಡ್ ಕೇಸ್’, ಸರಿಪೋದಾ ಸನಿವಾರಂ’ ಹೀಗೆ ತಮಿಳು, ತೆಲುಗು ಹಾಗೂ ಮಲಯಾಳ ಸಿನಿಮಾಗಳಲ್ಲಿ ನಟಿಸಿರುವ ಅದಿತಿ ಇಲ್ಲಿ ಕೈಯಲ್ಲಿ ಗನ್ ಹಾಗೂ ವಾಕಿಟಾಕಿ ಹಿಡಿದು ಕಾಣಿಸಿಕೊಂಡಿದ್ದಾರೆ.
ಧನಂಜಯ ಹಾಗೂ ಶಿವರಾಜ್‌ಕುಮಾರ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ನಟಿಸಿದ್ದಾರೆ. ‘ಶಂಕರ್’ ಎನ್ನುವ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ 70ರ ದಶಕದ ಶೈಲಿಯಲ್ಲಿದೆ. ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಡ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ತೆರೆಕಾಣಲಿದೆ.
