ಉದಯವಾಹಿನಿ, ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮಾಹಿತಿ ನೀಡಿದ್ದಾರೆ.ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆ ಕೇಳಿದರು. 3 ವರ್ಷಗಳಲ್ಲಿ ವಸತಿ ನಿಲಯಗಳಲ್ಲಿ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯ, ವೈಯಕ್ತಿಕ ಕಾರಣ ಸೇರಿ ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. 7-8ನೇ ತರಗತಿ ಮಕ್ಕಳೇ ಜಾಸ್ತಿ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಅಂತ ಮನವಿ ಮಾಡಿದ್ದಾರೆ.
ಸಚಿವ ಮಹದೇವಪ್ಪ ಉತ್ತರ ನೀಡಿ, ಕಳೆದ 3 ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ, ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಶಾಲೆ-10, ವಸತಿ ಶಾಲೆ-05 ಹಾಗೂ ವಿದ್ಯಾರ್ಥಿ ನಿಲಯ-12 ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಪ್ರೇಮ ವೈಫಲ್ಯ, ವೈಯಕ್ತಿಕ, ಮಾನಸಿಕ ಖಿನ್ನತೆ, ಆನ್ ಲೈನ್ ಜೂಜಾಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಆತ್ಮಹತ್ಯೆ ತಡೆಗೆ ಒಂದು ನೀತಿ ತರುತ್ತಿದ್ದೇವೆ. ACS ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಗೃಹ ಇಲಾಖೆ, ಆರೋಗ್ಯ, ತಹಶೀಲ್ದಾರ ಸೇರಿ ಹಲವರನ್ನ ಜಾಗೃತಿಗೆ ಬಳಸಿಕೊಳ್ತೀವಿ. ACS ವರದಿ ಬಂದ ಕೂಡಲೇ ಆತ್ಮಹತ್ಯೆ ತಡೆ ನೀತಿ ಜಾರಿ ಮಾಡ್ತೀವಿ. ಜಾಗೃತಿ ಮೂಡಿಸೋ ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.
