ಉದಯವಾಹಿನಿ, ಬೆಂಗಳೂರು: 5 ಲಕ್ಷ ಲಂಚ ಪಡೆದ ಆರೋಪದಡಿ ಜೈಲು ಸೇರಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜಾಮೀನು ಸಿಕ್ಕ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶಿರಹಟ್ಟಿ ಶಾಸಕರಾಗಿರುವ ಚಂದ್ರು ಲಮಾಣಿ ಕಳೆದ 15 ದಿನದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯ ಚಂದ್ರು ಲಮಾಣಿಗೆ 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿತ್ತು. ಇಂದು ಎಲ್ಲ ಪ್ರೊಸೀಜರ್ ಮುಗಿಸಿ ಬಿಡುಗಡೆಗೊಂಡಿದ್ದಾರೆ
ರೆಸಾರ್ಟ್‌ಗೆ ಆಗಮಿಸಿದ ಶಾಸಕರನ್ನು ರಾಜ್ಯ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಸ್ವಾಗತ ಮಾಡಿದರು. ಶಾಸಕರು ತಂಗಿರುವ ಕಾರಣ ರೆಸಾರ್ಟ್ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಬಂದಾಗ ಅಸ್ಸಾಂ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬ ಮಾಹಿತಿ ಬಂದಿತ್ತು. ಆದರೆ ಈಗ ಬೆಂಗಳೂರಿಗೆ ಬಂದಿರುವುದು ಒಡಿಶಾ ಶಾಸಕರು ಎನ್ನುವುದು ತಿಳಿದು ಬಂದಿದೆ.
