z
ಉದಯವಾಹಿನಿ, ಬೆಂಗಳೂರು: ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಎಂದಿಗೂ ನಾನು ಪಕ್ಷದ ಕಾರ್ಯಕರ್ತ. ಆದರೆ ಪಕ್ಷವು ನನಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೂ ನಾನು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾರೆ ಅನ್ನುವ ವಿಚಾರದ ಬಗ್ಗೆ

ನನಗೆ ಗೊತ್ತಿಲ್ಲ. ನಾನು ಸದ್ಯ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತ್ರ. ರಾಜ್ಯಾಧ್ಯಕ್ಷ ಸ್ಥಾನ ಅನ್ನೋದು ಒಂದು ದೊಡ್ಡ ಜವಾಬ್ದಾರಿ. ಅದನ್ನು ಕೇಳಿ ಪಡೆಯಲು ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ. ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದರು.
ನನ್ನನ್ನು ರಾಜ್ಯಾಧ್ಯಕ್ಷ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಭವಿಷ್ಯ ಎನ್ನುವುದು ನಿರೀಕ್ಷೆ ಮತ್ತು ಆಕಾಂಕ್ಷೆ. ಭವಿಷ್ಯದ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಮತ್ತು ಯಾವಾಗ ಕೊಡಬೇಕು ಎಂಬುದನ್ನು ದೊಡ್ಡವರು ನಿರ್ಧಾರ ಮಾಡುತ್ತಾರೆ ಎಂದರು. ಸಿ.ಟಿ.ರವಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ದೇವೇಗೌಡರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ದೇವೇಗೌಡರು ನಮ್ಮ ರಾಜ್ಯದ ಹಿರಿಯರು. ದೇವೇಗೌಡರು ಅಂತಿಮ ನಿರ್ಣಯ ಆಗಿದೆ ಅಂತ ಹೇಳಿಲ್ಲ, ಚರ್ಚೆ ಆಗಿದೆ ಎಂದಷ್ಟೇ ಹೇಳಿದ್ದಾರೆ. ಹೈಕಮಾಂಡ್? ತೀರ್ಮಾನ ಏನು ಎಂಬುದು ಗೊತ್ತಿಲ್ಲ ಎಂದು ನುಡಿದರು.
