ಉದಯವಾಹಿನಿ, ಜೈಸಲ್ಮೇರ್(ರಾಜಸ್ಥಾನ): ರಾಜಸ್ಥಾನದ ಜೈಸಲ್ಮೇರ್‌ನಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿದೆ. ಓರ್ವ ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ರಾಜಸ್ಥಾನದ ನಾಚ್ನಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ಧನೇರಾ ತಾಲ್ಲೂಕಿನ ನೆನವಾ ಗ್ರಾಮದ ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ವಲ್ಪ ಹೊತ್ತಿನಲ್ಲೇ ಬೆಂಕಿ ಇಡೀ ಬಸ್ಸನ್ನು ಆವರಿಸಿಕೊಂಡಿದೆ. ವಾಹನದೊಳಗೆ ಮಲಗಿದ್ದ ಪ್ರಯಾಣಿಕರು ಪ್ರಾಣರಕ್ಷಣೆಗೆ ಬಸ್ಸಿನ​ ಕಿಟಕಿಗಳನ್ನು ಒಡೆದು ಹಾರಿ ಬಚಾವಾಗಿದ್ದಾರೆ. ಈ ವೇಳೆ ಓರ್ವ ಪ್ರಯಾಣಿಕ ಸುಟ್ಟು ಗಾಯಗಳಿಂದ ಸಾವನ್ನಪ್ಪಿದ್ದಾನೆ.

ಕನಿಷ್ಠ ಆರು ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ.
ಧನೇರಾ ಪೊಲೀಸ್ ಠಾಣೆಯ ಪಿಐ ಎಂ.ಜೆ.ಚೌಧರಿ ಮಾತನಾಡಿ, “ನೆನವಾ ಗ್ರಾಮದ ಬಳಿ ಐಷಾರಾಮಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಬ್ಬ ಪ್ರಯಾಣಿಕ ಗಂಭೀರವಾಗಿ ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಅವರನ್ನು ಪಾಲನ್‌ಪುರ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು. ಬೆಂಕಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಘಟನೆ ಬೆನ್ನಲ್ಲೇ ಅಗ್ನಿಶಾಮಕದಳ ಸ್ಥಳ ತಲುಪಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸಿದೆ. ಎಫ್‌ಎಸ್‌ಎಲ್ ವರದಿ ಬಂದ ನಂತರವೇ ನಿಖರ ಕಾರಣ ತಿಳಿಯಲಿದೆ” ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!