ಉದಯವಾಹಿನಿ, ಬಹು ನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ದ ಕೆಲಸಗಳು ವೇಗವಾಗಿ ಸಾಗುತ್ತಿವೆ. ನಿರ್ದೇಶಕ ನಿತೇಶ್ ತಿವಾರಿ ಈ ಭಾರೀ ಬಜೆಟ್ ಸಿನಿಮಾವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ರೂಪಿಸಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಮತ್ತು ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ.
ಈಗಾಗಲೇ ಚಿತ್ರದ ಮೊದಲ ಭಾಗದ ಶೂಟಿಂಗ್ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇದೇ ವೇಳೆ ಎರಡನೇ ಭಾಗದ ಚಿತ್ರೀಕರಣ ಕೂಡ ಆರಂಭಗೊಂಡಿದೆ. ರಾಮನ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್ ಸದ್ಯ ಸೆಟ್‌ನಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದು, ಶೀಘ್ರದಲ್ಲೇ ಯಶ್ ಮತ್ತು ಸನ್ನಿ ಡಿಯೋಲ್ ಕೂಡ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
