ಉದಯವಾಹಿನಿ, ಬೆಂಗಳೂರು: ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್‌ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ಆರೋಪಿ ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿತ್ತು. ಆದರೆ ಮದುವೆಯಾಗಿರುವ ವಿಷಯ ಯುವತಿಗೆ ತಿಳಿದಿರಲಿಲ್ಲ. ಇದೀಗ ಈ ವಿಚಾರ ತಿಳಿದು ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ತಾರಕಕ್ಕೇರಿ ಆರೋಪಿ ವೈಯರ್‌ನಿಂದ ಯುವತಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ.ಸದ್ಯ ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!