ಉದಯವಾಹಿನಿ, ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾಸರಕೊಪ್ಪಲಿನಲ್ಲಿದ್ದ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ನಿವಾಸಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾದವರು. ಹಾಸನದ ಗುಡ್ಡೇನಹಳ್ಳಿಯಲ್ಲಿ ಎರಡು ಹಾಸ್ಟೆಲ್‍ಗಳ ವಾರ್ಡನ್ ಆಗಿದ್ದ ಲೋಕೇಶ್ ಕೆಲ ದಿನಗಳ ಹಿಂದೆ ಮ್ಯಾನೇಜರ್ ಆಗಿ ಬಡ್ತಿ ಹೊಂದಿದ್ದರು. ಸದ್ಯ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‍ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!