ಉದಯವಾಹಿನಿ, ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಸ್ಥಳವಾದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹಿಮವದ್ ಗೋಪಾಲಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಗೋಪಾಲಸ್ವಾಮಿಯ ಉತ್ಸವ ಮೂರ್ತಿಯನ್ನು ಫಲಪುಷ್ಪಗಳಿಂದ ಅಲಂಕೃತಗೊಂಡಿದ್ದ ರಥದಲ್ಲಿ ಇರಿಸಿ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿಯನ್ನು ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ನೆರವೇರಿಸಿದರು.
ಪ್ರತಿ ವರ್ಷದಂತೆ ಅರಣ್ಯದಿಂದ ತಂದಿದ್ದ ಹಂಬಿನಿಂದ ತೇರನ್ನು ಸಹಸ್ರಾರು ಭಕ್ತರು ಜಯಘೋಷದಿಂದ ಎಳೆದರು. ಬ್ರಹ್ಮರಥೋತ್ಸವದ ಹಿನ್ನೆಲೆ ತಾಲೂಕು ಆಡಳಿತ ಅಗತ್ಯ ವ್ಯವಸ್ಥೆ ಕಲ್ಪಿಸಿತ್ತು. ಚಾಮರಾಜನಗರ ಜಿಲ್ಲೆ ಮತ್ತು ರಾಜ್ಯದ ನಾನಾ ಕಡೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಸಿಲಿಂಡರ್ ಪೂರೈಕೆ, ದಾಸೋಹ ಆರಂಭ: ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿ ಶನಿವಾರ ನಿಂತಿದ್ದ ದಾಸೋಹ ಇಂದು ಮತ್ತೆ ಆರಂಭಗೊಂಡ ಘಟನೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಸಿಲಿಂಡರ್ ಪೂರೈಕೆಯಾದ ಹಿನ್ನೆಲೆ ಭಾನುವಾರ ಮಧ್ಯಾಹ್ನ 1 ರಿಂದ ಭಕ್ತರಿಗೆ ಪ್ರಸಾದವನ್ನು ನೀಡಲಾಗುತ್ತಿದೆ. ಶನಿವಾರದಂದು ಗ್ಯಾಸ್ ಸಿಲಿಂಡರ್ ಇಲ್ಲದ ಪರಿಣಾಮ ದಾಸೋಹ ಬಂದ್ ಆಗಿತ್ತು. ಬಿಳಿಗಿರಿರಂಗನ ಬೆಟ್ಟಕ್ಕೆ ಇಂದು ಸಿಲಿಂಡರ್ ಪೂರೈಕೆಯಾದ ಹಿನ್ನೆಲೆ ಮಧ್ಯಾಹ್ನದಿಂದ ಮತ್ತೆ ನಿತ್ಯ ದಾಸೋಹ ಪ್ರಾರಂಭವಾಯಿತು. ವಾರದಲ್ಲಿ ಶನಿವಾರ, ಭಾನುವಾರ ಎರಡು ದಿನಗಳು ಬೆಟ್ಟದ ವಿಶೇಷ ದಿನಗಳಾಗಿದ್ದು ಸಹಸ್ರಾರು ಮಂದಿ ಭಕ್ತರು ಬರುತ್ತಾರೆ. ನಿನ್ನೆ ಬೆಟ್ಟಕ್ಕೆ ಬಂದಿದ್ದ ಭಕ್ತರು ದೇವರ ದರ್ಶನ ಪಡೆದು ಪ್ರಸಾದವಿಲ್ಲದೇ ವಾಪಸ್ ತೆರಳಿದ್ದರು.ದಾಸೋಹಕ್ಕೆ ಯಾವುದೇ ತೊಂದರೆಯಿಲ್ಲ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯಾವುದೇ ಸಿಲಿಂಡರ್ ಕೊರತೆಯಾಗಿಲ್ಲ. ಎಂದಿನಂತೆ ದಾಸೋಹ ಹಾಗೂ ಲಾಡು ಪ್ರಸಾದ ತಯಾರಿಕೆ ನಡೆಯುತ್ತಿದೆ. ಮುಂದಿನ ವಾರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 16 ರಿಂದ 19 ರವರೆಗೆ ಜರುಗಲಿದ್ದು ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಈಗಾಗಲೇ ಅಗತ್ಯ ಸಿಲಿಂಡರ್ ಶೇಖರಣೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಗ್ಯಾಸ್ ವಿತರಕರೂ ಸಹ ನಿಗದಿತ ಸಮಯಕ್ಕೆ ಗ್ಯಾಸ್ ವಿತರಣೆ ಮಾಡುತ್ತಿದ್ದಾರೆ. ಇದರಿಂದ ಯಾವುದೇ ತೊಂದರೆಯಾಗುತ್ತಿಲ್ಲ, ಎಂದಿನಂತೆ ದಾಸೋಹ ಹಾಗೂ ಲಾ
