ಉದಯವಾಹಿನಿ, ಗಾಂಧಿನಗರ: 45,000 ಮೆಟ್ರಿಕ್ ಟನ್ ಎಲ್‌ಪಿಜಿ (LPG) ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರು ತಲುಪಿದೆ.ಈ ಬಗ್ಗೆ ಮಾಹಿತಿ ನೀಡಿದ್ದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ, ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಮತ್ತು ಶಿವಾಲಿಕ್ ಎಂಬ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಬರುತ್ತಿವೆ. ಶಿವಾಲಿಕ್ ಮಾರ್ಚ್ 16 ರಂದು ಮತ್ತು ನಂದಾ ದೇವಿ ಮಾರ್ಚ್ 17 ರಂದು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು. ಈಗ ಆ ನಿರೀಕ್ಷೆಯಂತೆ ಇಂದು ಮಾ.16 ರಂದು ಶಿವಾಲಿಕ್‌ ಹಡಗು ಭಾರತಕ್ಕೆ ಬಂದು ತಲುಪಿದೆ.
ಅಮೆರಿಕ – ಇರಾನ್‌ ಯುದ್ಧದಿಂದ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಹಲವಾರು ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ರೆಸ್ಟೋರೆಂಟ್‌ಗಳು, ಹಾಸ್ಟೆಲ್‌ಗಳು ಮತ್ತು ಕೆಲವು ಕಂಪನಿಗಳು, ಮನೆಗಳು ಮತ್ತು ಹೋಟೆಲ್‌ಗಳಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಎಲ್‌ಪಿಜಿ ಸರಬರಾಜಲ್ಲಿ ವಿಳಂಬವಾದರೆ ಮತ್ತಷ್ಟು ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಇದರ ನಡುವೆ ಶಿವಾಲಿಕ್‌ ಹಡಗು ಭಾರತ ತಲುಪಿದೆ. ಮತ್ತೊಂದು ಹಡಗು ನಂದಾ ದೇವಿ ಮಾರ್ಚ್ 17 ರಂದು ಕಾಂಡ್ಲಾ ಬಂದರಿಗೆ ಆಗಮಿಸಲಿದೆ. ಇದರಿಂದ ಗ್ಯಾಸ್‌ ಸಮಸ್ಯೆಗೆ ಕೊಂಚ ರಿಲೀಫ್‌ ಸಿಗಲಿದೆ.

Leave a Reply

Your email address will not be published. Required fields are marked *

error: Content is protected !!