ಉದಯವಾಹಿನಿ, ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ನಡುವೆಯೇ ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದಿದ್ದು, ಬಿರುಬಿಸಿಲಿಗೆ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಹಾಗೂ ಸುತ್ತಮುತ್ತಲ ಗ್ರಾಮದಲ್ಲಿ ಜೋರು ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಜೋರು ಮಳೆಗೆ ಭೂಮಿಯೂ ತಂಪಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಸಿರವಾರ, ಮಾನ್ವಿ ,ಲಿಂಗಸೂಗೂರು ತಾಲೂಕಿನ ಹಲವೆಡೆಯೂ ಮಳೆಯಾಗಿದೆ. ಕೆಲವೆಡೆ ಗುಡುಗು ಸಹಿತ ಅಬ್ಬರಿಸಿದ ವರುಣ ಇನ್ನೂ ಹಲವೆಡೆ ಆಲೆಕಲ್ಲು ಮಳೆ ಸುರಿಸಿದ್ದಾನೆ.

Leave a Reply

Your email address will not be published. Required fields are marked *

error: Content is protected !!