ಉದಯವಾಹಿನಿ, ರಾಯಚೂರು: ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತ ವ್ಯಕ್ತಿಯನ್ನು 23 ವರ್ಷದ ವಿಜಯಕುಮಾರ್ ಹಾಗೂ ಆರೋಪಿಗಳನ್ನು ಪ್ರಸಾದ್, ಮಲ್ಲೇಶ್, ಅಮರೇಶ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಪ್ರಸಾದ್, ಮಲ್ಲೇಶ್‌ನನ್ನ ಬಂಧಿಸಿದ್ದಾರೆ.

ಆರೋಪಿ ಪ್ರಸಾದ್ ಪತ್ನಿ ಹಾಗೂ ಮೃತ ವಿಜಯಕುಮಾರ್ ನಡುವೆ ಅನೈತಿಕ ಸಂಬಂಧವಿತ್ತು. ಈ ಹಿಂದೆ ವಿಜಯಕುಮಾರ್ ಪ್ರಸಾದ್‌ನ ಪತ್ನಿಯನ್ನ ಕರೆದುಕೊಂಡು ಹೋಗಿದ್ದ. ಕಳೆದ ಮೂರು ತಿಂಗಳಿನಿಂದ ಆರೋಪಿಗಳು ವಿಜಯಕುಮಾರ್‌ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಬಳ್ಳಾಪುರ ಗ್ರಾಮದಲ್ಲಿ ಜಾಗದ ವಿಷಯಕ್ಕೆ ನ್ಯಾಯ ಪಂಚಾಯಿತಿ ನಡೆಯುವ ಜಾಗಕ್ಕೆ ಹೋಗಿರುವುದಾಗಿ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಬಂದು ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ.
ಈ ಸಂಬಂಧ ಮೃತನ ಕುಟುಂಬಸ್ಥರು ದೂರು ನೀಡಿದ್ದು, ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!