ಉದಯವಾಹಿನಿ, ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರ ಆಲಿಕಲ್ಲು (Hailstorm) ಸಹಿತ ಮಳೆಯಾಗಿದೆ. ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ.ಗದಗ ಜಿಲ್ಲೆ ರೋಣ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಣಸಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ನಿಂಗಪ್ಪ ಅಮಾತ್ಯ ಸಾವನ್ನಪ್ಪಿದ್ದಾರೆ. ಬೆಣ್ಣೆಹಳ್ಳ ಸಮೀಪ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ರೈತ ಹಿಂದಿರುಗುವಾಗ ಸಿಡಿಲು ಬಡಿದು ಸಾವನಪ್ಪಿದ್ದಾರೆ. ಇನ್ನು ಬೆಳಗಾವಿಯಲ್ಲಿಯೂ ಮನೆಯ ಗೋಡೆ ಕುಸಿದು ಪತ್ನಿ ಸಾವನ್ನಪ್ಪಿದ್ದು, ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಂಟಮೂರಿ ಗ್ರಾಮದ ಪರ್ವಿನ್ ಬೇಪಾರಿ ಸಾವನ್ನಪ್ಪಿದ್ರೆ, ಶರೀಫ್ ಬೇಪಾರಿ ಬದುಕುಳಿದಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬಿರುಗಾಳಿಯಿಂದ 20ಕ್ಕೂ ಹೆಚ್ಚು ಗೂಡಂಗಡಿಗಳ ಮೇಲ್ಛಾವಣಿ ಹಾರಿ ಹೋಗಿವೆ.
