ಉದಯವಾಹಿನಿ, ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಆಯ್ತು ಈಗ ಕಾಂಗ್ರೆಸ್‌ ಶಾಸಕರೇ ಡಿನ್ನರ್‌ ಮೀಟಿಂಗ್‌ ಮಾಡಿದ್ದಾರೆ.ನಗರದ ಖಾಸಗಿ ಹೋಟೆಲಿನಲ್ಲಿ ಮೊದಲ ಬಾರಿ ಗೆದ್ದ 30ಕ್ಕೂ ಹೆಚ್ಚು ಶಾಸಕರು ಡಿನ್ನರ್ ಸಭೆ ನಡೆಸಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಗೆ 4-5 ಹಿರಿಯ ಶಾಸಕರ ಸಾಥ್‌ ನೀಡಿದ್ದಾರೆ.
ಸಂಪುಟ ಪುನಾರಚನೆ ನಡೆದರೆ ತಮ್ಮನ್ನು ಪರಿಗಣಿಸುವಂತೆ ಈ ಹಿಂದೆ ಹೊಸದಾಗಿ ಆಯ್ಕೆಯಾದ ಶಾಸಕರು ಬೇಡಿಕೆ ಇಟ್ಟಿದ್ದರು. ಸಿಎಂ ಬದಲಾವಣೆ, ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕೈ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಹಿಂದೆ ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಅಲಂಕರಿಸಿ 6 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕರಿಗೆ ಡಿನ್ನರ್‌ ಕೊಟ್ಟಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯನವರು ನಿನ್ನೆ(ಮಾ.16 ರಂದು) 14 ಮಂದಿ ಶಾಸಕರ ಜೊತೆ ತಮ್ಮ ಕಾವೇರಿ ನಿವಾಸದಲ್ಲಿ ಡಿನ್ನರ್‌ ಸಭೆ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!