ಉದಯವಾಹಿನಿ, ನವದೆಹಲಿ: ಉತ್ತರ ಭಾರತದಲ್ಲಿ ಮಳೆ ನಿಲ್ಲುವ ಹಾಗೆ ಕಾಣುತ್ತಿಲ್ಲ.ದೇಶದ ಪೂರ್ವ, ಈಶಾನ್ಯ ಮತ್ತು ಪೂರ್ವ ಕೇಂದ್ರೀಯ ಭಾಗಗಳಲ್ಲಿ ಮುಂದಿನ ನಾಲೈದು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರ ಮಳೆಯು ಭಾರತದ ಅನೇಕ ಭಾಗಗಳಲ್ಲಿ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.ಮಳೆಯ ಅವಾಂತರದಿಂದಾಗಿ ಶಾಲಾ-ಕಾಲೇಜ ಮುಚ್ಚಲ್ಪಟವು ಮಳೆಯಿಂದ ಬಾಧಿತ ಜನರನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು .ಮುಂಗಾರು ಮಳೆಯಿಂದಾಗಿ ಪ್ರವಾಹ, ಸಂಚಾರ ಅಸ್ತವ್ಯಸ್ತತೆ, ವಿದ್ಯುತ್ ಮತ್ತು ನೀರು ಪೂರೈಕೆಯಲ್ಲಿ ವ್ಯತ್ಯಯ, ಹೀಗೆ ಜನರು ನಾನಾ ತೊಂದರೆ ಅನುಭವಿಸುತ್ತಿದ್ದಾರೆ.
ಒಡಿಶಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ-ಚಂಡೀಗಢ-ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಬಿಹಾರ, ಮಹಾರಾಷ್ಟ್ರ ಮತ್ತು ಗುಜರಾತ್ ಮತ್ತು ಈಶಾನ್ಯ ಭಾರತದ ರಾಜ್ಯಗಳ ಕೆಲವು ಭಾಗಗಳು ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವಾರ ಸುರಿದ ವ್ಯಾಪಕ ಮಳೆಯಿಂದ ತತ್ತರಿಸಿರುವ ಮುಂಬೈ ಮಂಗಳವಾರದವರೆಗೆ ‘ಗ್ರೀನ್’ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ ೨ ಮತ್ತು ೩ ರಂದು ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಮಳೆಯಿಂದ ತತ್ತರಿಸಿರುವ ತೆಲಂಗಾಣದಲ್ಲಿ ಇಂದು ಕೆಲವೆಡೆ ಸಾಧಾರಣ ಮಳೆಯಾಗಲಿದೆ. ರಾಜಸ್ಥಾನ, ಒಡಿಶಾ ಮತ್ತು ಜಾರ್ಖಂಡ್‌ನ ಪೂರ್ವ ಭಾಗಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ‘ಭಾರೀಯಿಂದ ಅತಿ ಭಾರೀ’ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
