ಉದಯವಾಹಿನಿ, : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ರಾಜಸ್ಥಾನ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ ದಾಖಲೆ ಒಂದನ್ನು ಮುರಿಯುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ. 2025ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಹೊಂದಿದ್ದಾರೆ. ಇದೀಗ, ಇತ್ತೀಚೆಗೆ ನಡೆದ ಬಿಸಿಸಿಐನ ನಮನ್‌ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಐಪಿಎಲ್‌ನ ಪಂದ್ಯವೊಂದರಲ್ಲಿ ಕ್ರಿಸ್ ಗೇಲ್ ಅವರು ಗಳಿಸಿರುವ 175 ರನ್‌ಗಳ ದಾಖಲೆ ಮುರಿಯುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ 19 ವರ್ಷದೊಳಗಿನವರ ಭಾರತ ತಂಡದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ವೈಭವ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಮುಕ್ತಾಯಗೊಂಡ 19 ವರ್ಷದೊಳಗಿನವರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಸ್ಫೋಟಕ 175 ರನ್ ಕಲೆಹಾಕಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!