ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸರು ನೋಟಿಸ್ ನೀಡಿದ್ದಾರೆ.ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಲಾಗಿತ್ತು. ವೀಡಿಯೋ ವೈರಲ್ ಆಗುತ್ತಿದ್ದಂತೆ ರಿಕ್ಕಿ ರೈ ನಾನು ಕಾರು ಓಡಿಸಿಲ್ಲ ಎಂದಿದ್ದರು. ಅನಿಲ್ ಕುಂಬ್ಳೆ ಸರ್ಕಲ್ ಬಳಿಯ ಸಿಸಿಟಿವಿ ಪರಿಶೀಲನೆ ವೇಳೆ ರಿಕ್ಕಿ ರೈ ಕಾರು ಓಡಿಸಿರುವುದು ಪತ್ತೆಯಾಗಿದೆ. ಸದ್ಯ ಲ್ಯಾಂಬೋರ್ಗಿನಿ ಕಾರನ್ನು ವಶಕ್ಕೆ ಪಡೆದಿರುವ ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸರು ರಿಕ್ಕಿ ರೈಗೆ ನೋಟಿಸ್ ಕಳುಹಿಸಿದ್ದಾರೆ.
ಏನಿದು ಕಾರ್ ಡ್ರಿಫ್ಟಿಂಗ್?
ಕಾರ್ ಡ್ರಿಫ್ಟಿಂಗ್ ಎಂಬುದು ವಾಹನದ ಹಿಂದಿನ ಚಕ್ರಗಳ ಹಿಡಿತವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿ, ತಿರುವುಗಳಲ್ಲಿ ನಿಯಂತ್ರಿತ ರೀತಿಯಲ್ಲಿ ಜಾರುವಂತೆ ಮಾಡುವ ಸಾಹಸಮಯ ಚಾಲನಾ ತಂತ್ರವಾಗಿದೆ. ಈ ಕಲೆಗೆ ಹೆಚ್ಚಿನ ಕೌಶಲ್ಯದ ಅಗತ್ಯವಿದೆ. ವೇಗ, ನಿಯಂತ್ರಣ ಮತ್ತು ಕೌಶಲ್ಯವನ್ನು ಪ್ರದರ್ಶಿಸುವ ಮೋಟಾರ್‌ಸ್ಪೋರ್ಟ್ ಆಗಿದೆ.
