ಉದಯವಾಹಿನಿ, ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ದಿಢೀರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸಚಿವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಆಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!