ಉದಯವಾಹಿನಿ, ಧಾರವಾಡ: ಇಲ್ಲಿನ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಪತ್ತೆಯಾದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರ ಕಾರು ರಾಮಾಪುರದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಪತ್ತೆಯಾಗಿದೆ. ಕಾರಿನಲ್ಲಿದ್ದ ಮೃತದೇಹ ಪತ್ತೆಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಮಧ್ಯೆ ನಿನ್ನೆಯಿಂದ ರಾಜು ಬೋಳಶೆಟ್ಟಿ ಅವರು ನಾಪತ್ತೆಯಾಗಿರುವುದರಿಂದ ಕಿಡಿಗೇಡಿಗಳು ರಾಜು ಬೋಳಶೆಟ್ಟಿ ಅವರನ್ನ ಕೊಲೆಗೈದು, ಕಾರಿನಲ್ಲಿ ಹಾಕಿ ಸುಟ್ಟುಹಾಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿದ್ದ ಶವ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೇರೆಡೆ ಕೊಲೆ ಮಾಡಿ, ರೈಲ್ವೆ ಹಳಿ ಬಳಿ ತಂದು ಪೆಟ್ರೋಲ್‌ ಸುರಿದು ಶವ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಎಸ್ಪಿ ಗುಂಜನ್‌ ಆರ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!