ಉದಯವಾಹಿನಿ, ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ(Colombia) ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ. ನಗರ ಕೇಂದ್ರದಿಂದ ಕೇವಲ 3 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ. ಅಧಿಕಾರಿಗಳು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ವಿಮಾನದಲ್ಲಿದ್ದ 40 ಕ್ಕೂ ಹೆಚ್ಚು ಜನರ ಸ್ಥಿತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!