ಉದಯವಾಹಿನಿ, ಪ್ರತಿಯೊಬ್ಬರ ಮನೆಯಲ್ಲೂ ಒಬ್ಬಟ್ಟಿನ ಘಮ ಇರಲೇಬೇಕು. ತೆಂಗಿನ ಕಾಯಿ ಹೋಳಿಗೆ, ತೊಗರಿಬೇಳೆ ಒಬ್ಬಟ್ಟು ಅಥವಾ ಕಡಲೆಬೇಳೆಯನ್ನ ಬಳಸಿಯೂ ಒಬ್ಬಟ್ಟು ಮಾಡ್ತಾರೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಸುಲಭವಾಗಿ ಬೇಳೆ ಒಬ್ಬಟ್ಟು ಯಾವ ರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ನೀವೂ ಕೂಡ ಹಬ್ಬದ ದಿನ ನಿಮ್ಮ ಮನೆಯಲ್ಲಿ ಈ ರೆಸಿಪಿಯನ್ನು ಟ್ರೈ ಮಾಡಿ.ಬೇಗಾಗುವ ಸಾಮಾಗ್ರಿಗಳು:
ತೊಗರಿ ಬೇಳೆ – 1/2 ಕೆಜಿ
ಚಿರೋಟಿ ರವೆ – ಕಾಲು ಕಪ್
ಮೈದಾಹಿಟ್ಟು – 2 ಬಟ್ಟಲು
ಬೆಲ್ಲ – 1/2 ಕೆಜಿ ಅಥವಾ ನಿಮಗೆ ಎಷ್ಟು ಸಿಹಿ ಬೇಕೋ ಅದಕ್ಕೆ ಅನುಗುಣವಾಗಿ ಬಳಸಿ
ತೆಂಗಿನಕಾಯಿ ತುರಿ – ಒಂದು ಬಟ್ಟಲು
ಏಲಕ್ಕಿ ಪುಡಿ – ಸ್ವಲ್ಪ
ತುಪ್ಪ – ಎರಡು ಚಮಚ
ಎಣ್ಣೆ – 1 ಕಪ್
ಉಪ್ಪು – 1 ಚಿಟಿಕೆ
ಅರಶಿಣ ಪುಡಿ – 1 ಚಿಟಿಕೆ
ಮಾಡುವ ವಿಧಾನ:
* ಒಂದು ಪಾತ್ರೆಯಲ್ಲಿ ಮೈದಾಹಿಟ್ಟು, ಚಿರೋಟಿ ರವೆ, ಅರಿಶಿನ, ಒಂದು ಚಿಟಿಕೆ ಉಪ್ಪು ಮತ್ತು ತುಪ್ಪ ಹಾಕಿ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಚಪಾತಿ ಹಿಟ್ಟಿಗಿಂತ ತುಂಬಾ ಮೃದುವಾಗಿ ಕಲಸಿಕೊಳ್ಳಿ. ನಂತರ ಇದಕ್ಕೆ 1/2 ಕಪ್ ಎಣ್ಣೆ ಹಾಕಿ ಚೆನ್ನಾಗಿ ನಾದಿಕೊಂಡು 30 ನಿಮಿಷ ನೆನೆಯಲು ಬಿಡಿ.
* ಬೆಲ್ಲವನ್ನು ಪುಡಿ ಮಾಡಿಟ್ಟುಕೊಳ್ಳಿ.
* ಒಂದು ಪಾತ್ರೆಯಲ್ಲಿ ತೊಗರಿಬೇಳೆ, ಚಿಟಿಕೆ ಅರಿಶಿನ ಮತ್ತು ಒಂದು ಚಮಚ ಎಣ್ಣೆ ಹಾಗೂ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಬೇಯಿಸಿಕೊಳ್ಳಿ.
* ಬೇಳೆ ನುಣ್ಣಗಾಗುವಂತೆ ಬೇಯಿಸಬೇಡಿ. ಸ್ವಲ್ಪ ಗಟ್ಟಿಯಿರುವಾಗಲೇ ಇದಕ್ಕೆ ಪುಡಿ ಮಾಡಿದ ಬೆಲ್ಲ, ತೆಂಗಿನಕಾಯಿ ತುರಿ, ಮತ್ತು ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ ಒಲೆಯಿಂದ ಇಳಿಸಿ.
* ಈ ಮಿಶ್ರಣ ತಣ್ಣಗಾದ ನಂತರ ನುಣ್ಣಗೆ ರುಬ್ಬಿಕೊಳ್ಳಬೇಕು (ನೀರು ಸೇರಿಸಬಾರದು).
* ಹೀಗೆ ನುಣ್ಣಗೆ ರುಬ್ಬಿದ ಮಿಶ್ರಣವನ್ನ ಸಣ್ಣ ಸಣ್ಣ ಉಂಡೆಗಳಾಗಿ ಮಾಡಿಕೊಳ್ಳಿ.
