ಉದಯವಾಹಿನಿ, ಬೆಂಗಳೂರು: ಮಾ.28ರಿಂದ 2026ನೇ ಸಾಲಿನ ಐಪಿಎಲ್ (IPL 2026) ಆವೃತ್ತಿ ಆರಂಭವಾಗುತ್ತಿದೆ. ಎಂ.ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದ್ದು, ಕೆಲವೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ ಜೂ.4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಯಾವುದೇ ಲೋಪಗಳಾಗದಂತೆ ಪೊಲೀಸ್ ಇಲಾಖೆ ಹಾಗೂ ಸಂಚಾರಿ ಪೊಲೀಸರು ಕೆಲವು ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಮಾ.28ರಿಂದ 2026ನೇ ಸಾಲಿನ ಐಪಿಎಲ್ ಆವೃತ್ತಿ ಆರಂಭವಾಗುತ್ತಿದೆ. ಮೊದಲ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್‌ ಮುಖಾಮುಖಿಯಾಗಲಿವೆ.
ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದಾರೆ. ಪಂದ್ಯ ವೀಕ್ಷಿಸಲು ಬರುವವರಿಗೆ ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್‌ಪ್ ಮತ್ತು ಡ್ರಾಪ್ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಕೊರತೆಯಿರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!