ಉದಯವಾಹಿನಿ, ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
