ಉದಯವಾಹಿನಿ, ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್‌ ತುರ್ತು ನೋಟಿಸ್‌ ನೀಡಿದೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿ, ಅಂಗೀಕರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ‌, ಮುಡಾ ಕೇಸ್‌ನ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ದೂರನ್ನಾಧರಿಸಿ ಹೈಕೋರ್ಟ್‌ ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿಗೊಳಿಸಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಇತರ ಆರೋಪಿಗಳಾದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಅವರಿಗೂ ಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ. ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿ, ಅಂಗೀಕರಿಸಿತ್ತು. ಹಗರಣದ ಆರೋಪಿಗಳಾಗಿದ್ದ ಸಿದ್ದರಾಮಯ್ಯ (A1), ಪಾರ್ವತಿ (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರನ್ನ ದೋಷಮುಕ್ತಗೊಳಿಸಿತ್ತು. ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಕೋರ್ಟ್‌ ಆದೇಶ ನೀಡಿತ್ತು.

Leave a Reply

Your email address will not be published. Required fields are marked *

error: Content is protected !!