ಉದಯವಾಹಿನಿ, ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸಾರಿಗೆ ಬೋಟ್‌ ಏರುವ ವೇಳೆ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 23 ಜನರು ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದ ರಾಜಧಾನಿಯಲ್ಲಿ ನಡೆದಿದೆ. ಸುಮಾರಿಗೆ ನೈಋತ್ಯ ಜಿಲ್ಲೆ ರಾಜ್‌ಬರಿಯಿಂದ ಪ್ರಯಾಣಿಸುತ್ತಿದ್ದ ಬಸ್ ಸಾರಿಗೆ ಬೋಟ್‌ ಏರುವಾಗ ಅಪಘಾತ ಸಂಭವಿಸಿದೆ. ಹಲವಾರು ಪ್ರಯಾಣಿಕರು ಬಸ್‌ ಕಿಟಕಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಬಹುತೇಕರು ಒಳಗಡೆಯೇ ಲಾಕ್‌ ಆಗಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ.
ಬಸ್‌ ಸಾರಿಗೆ ಬೋಟ್‌ ಏರುತ್ತಿದ್ದಾಗ ʻಪದ್ಮಾʼ ನದಿಗೆ ಬಿದ್ದಿದೆ. ಈವರೆಗೆ 23 ಮೃತದೇಹಗಳನ್ನ ಹೊರತೆಗೆಯಲಾಗಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!