ಉದಯವಾಹಿನಿ, ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು. ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು.
ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್‌ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು. ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಸಿಬಿಎಸ್‌ಇ, ಐಸಿಎಸ್‌ಇ ರಾಜ್ಯದ ಪಠ್ಯಕ್ರಮಗಳಿಗೆ ಬಾರದೇ ಇರುವ ಕಾರಣ ಆ ಶಾಲೆಗಳಿಗೆ ಈ ನಿಯಮ ಅನ್ವಯೌಾಗುವುದಿಲ್ಲ.

Leave a Reply

Your email address will not be published. Required fields are marked *

error: Content is protected !!