ಉದಯವಾಹಿನಿ, ಬೆಂಗಳೂರು: ಉಪಚುನಾವಣೆಯ ಹಿನ್ನೆಲೆಯಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ. ದಾವಣೆಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು ನಡೆಸಬೇಕಾಗಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಏ.10ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೀರ್ಮಾನಿಸಿದೆ.
ಒಟ್ಟು‌ 33 ಹುದ್ದೆಗಳಿಗೆ ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಅಂದು ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದು, ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.ಒಟ್ಟು 2,500 ಮಂದಿ ಈ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!