ಉದಯವಾಹಿನಿ, ಬೆಂಗಳೂರು: ಇಳಿಜಾರಿನಲ್ಲಿ ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗುಜರಿ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ನಡೆದಿದೆ.
ಲಾರಿ ಡಿಕ್ಕಿಯಾದ ಪರಿಣಾಮ ಕಾರೊಳಗೆ ಮಲಗಿದ್ದ ಯುವಕ ಅಂಬದಾಸ್ (22) ಸಾವನ್ನಪ್ಪಿದ್ದಾನೆ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಆಂಧ್ರದಿಂದ ಸುಂಕದಕಟ್ಟೆಗೆ ಲಾರಿಯಲ್ಲಿ ಸ್ಟೀಲ್ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ರಾತ್ರಿ 1:30ರ ಸುಮಾರಿಗೆ ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದ. ಈ ವೇಳೆ ಕುರುಬರಹಳ್ಳಿ ಮುಖಾಂತರ ದಾರಿ ತೋರಿಸಿತ್ತು. ಕುರುಬರಹಳ್ಳಿ ಬಳಿ ರಸ್ತೆ ಬಹುತೇಕವಾಗಿ ಇಳಿಜಾರಾಗಿತ್ತು. ಲಾರಿ ಓವರ್ ಲೋಡ್ ಆಗಿದ್ದರಿಂದ ಇಳಿಜಾರಿನಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಏರ್‌ಪೋರ್ಟ್ ಪಿಕ್‌ಅಪ್‌ಗಾಗಿ ಕಾಯುತ್ತಾ ನಿಂತಿದ್ದ. ಈ ವೇಳೆ ಲಾರಿ ಗುದ್ದಿದ ರಭಸಕ್ಕೆ ಕಾರನ್ನು 50 ರಿಂದ 100 ಮೀ ದೂರಕ್ಕೆ ಎಳೆದೊಯ್ದಿದೆ. ಪರಿಣಾಮ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಈ ವೇಳೆ ಲಾರಿ ಚಾಲಕ ರಾಜಕಾಲುಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!