ಉದಯವಾಹಿನಿ, ಬೀದರ್: ಚಲಿಸುತ್ತಿದ್ದ ಮಾರುತಿ 800ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಯುರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು ಇದಾಗಿದೆ.
ಸ್ವತಃ ಸಚ್ಚಿದಾನಂದ ಅವರು ಮಾರುತಿ 800 ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದು ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿ, ಮಾಹಿತಿ ನೀಡಿದ್ದಾರೆ.ಸ್ವಲ್ಪ ಸಮಯದ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಭಾಗಶಃ ಸುಟ್ಟು ಹೋಗಿತ್ತು. ಮನ್ನಾಏಖೇಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
