ಉದಯವಾಹಿನಿ, ನವದೆಹಲಿ: ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ದೂರವಾಣಿ ಕರೆಯಲ್ಲಿ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಭಾಗಿಯಾಗಿದ್ದಾರೆ ಎಂಬ ವರದಿಯನ್ನು ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ.
ನಾವು ವರದಿಯನ್ನು ನೋಡಿದ್ದೇವೆ. ಮಾರ್ಚ್ 24 ರಂದು ನಡೆದ ದೂರವಾಣಿ ಸಂಭಾಷಣೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ನಡೆದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಇರಾನ್ ಜೊತೆಗಿನ ಯುದ್ಧದ ಬಗ್ಗೆ ಚರ್ಚಿಸಲು ಟ್ರಂಪ್ ಮಂಗಳವಾರ ಪ್ರಧಾನಿ ಮೋದಿಗೆ ಕರೆ ಮಾಡಿದ್ದರು.
ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ದಾಳಿ ನಡೆಸಿದ ಬಳಿಕ ಇಬ್ಬರು ನಾಯಕರ ನಡುವೆ ನಡೆದ ಮೊದಲ ಸಂವಹನ ಇದಾಗಿತ್ತು. ನ್ಯೂಯಾರ್ಕ್ ಟೈಮ್ಸ್ ಹೆಸರಿಸದ ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ಮಸ್ಕ್ ಇಬ್ಬರು ನಾಯಕರ ನಡುವಿನ ದೂರವಾಣಿ ಕರೆಯಲ್ಲಿ ಭಾಗಿಯಾಗಿದ್ದರು ಎಂದು ವರದಿ ಮಾಡಿತ್ತು.
