ಉದಯವಾಹಿನಿ, ಶ್ರೀನಗರ (ಜಮ್ಮು-ಕಾಶ್ಮೀರ): ಸಂಭವಿಸಿದ ಭಾರೀ ಹಿಮಪಾತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಭಾರೀ ಹಿಮ ಬಿದ್ದ ಕಾರಣ, ಇಲ್ಲಿನ ಝೋಜಿಲಾ ಪಾಸ್ ಮೂಲಕ ಕಾಶ್ಮೀರ ಮತ್ತು ಲಡಾಖ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್​ ಆಗಿದೆ. ಅಧಿಕಾರಿಗಳ ನೀಡಿದ ಮಾಹಿತಿಯ ಪ್ರಕಾರ, ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್​ ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಸರ್ವಋತು ರಾಷ್ಟ್ರೀಯ ಹೆದ್ದಾರಿಯ ಮೇಲೆ ಭಾರೀ ಹಿಮ ಬಿದ್ದಿದೆ. ಸಂಚಾರ ಅಪಾಯವನ್ನು ತಪ್ಪಿಸಲು ರಸ್ತೆಯನ್ನು ಬಂದ್​ ಮಾಡಲಾಗಿದೆ. ವಾಹನಗಳಲ್ಲಿ ಸಿಲುಕಿರುವ ಜನರು ಮತ್ತು ಹಿಮ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಿಮದಲ್ಲಿ ಹೂತು ಹೋದ 7 ಮಂದಿ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಹೂತುಹೋದವು. ಅದರಲ್ಲಿ, 10 ವರ್ಷದ ಒಂದು ಮಗು ಸೇರಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ, ಸಿಆರ್‌ಪಿಎಫ್, ಲಡಾಖ್ ಪೊಲೀಸ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀತ ಆಡಳಿತವು ಹಿಮ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಜಮ್ಮು-ಕಾಶ್ಮೀರದ ಶ್ರೀನಗರ ಮತ್ತು ಲಡಾಖ್​​ನ ಲೇಹ್ ನಗರವನ್ನು ಸಂಪರ್ಕಿಸುವ ದ್ವಿಪಥ ರಸ್ತೆಯ ಹೆದ್ದಾರಿ ಇದಾಗಿದ್ದು, ನಾಟಕೀಯ ಘಟನೆಗಳಿಗೆ ಹೆಸರುವಾಸಿಯಾಗಿದೆ. ಇದು 11,575 ಅಡಿ ಎತ್ತರದ ಝೋಜಿಲಾ ಪಾಸ್ ಮೂಲಕ ಹಾದುಹೋಗುತ್ತದೆ. ಅಲ್ಲಿ ಸುರಂಗವನ್ನು ನಿರ್ಮಿಸಲಾಗುತ್ತಿದೆ.

ಸಿಎಂ, ಗವರ್ನರ್​ ಸಂತಾಪ ಸೂಚನೆ: ಹಿಮಪಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಲಡಾಖ್ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಹಲವಾರು ಅಧಿಕಾರಿಗಳು ಮತ್ತು ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದರು.ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಹಿಮಪಾತದ ನಂತರದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು

Leave a Reply

Your email address will not be published. Required fields are marked *

error: Content is protected !!