ಉದಯವಾಹಿನಿ, :ವಾಷಿಂಗ್ಟನ್‌: ಬಂದ್‌ ಆಗಿರುವ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯದಿದ್ದರೆ ಇರಾನ್‌ ಘನಘೋರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಟ್ರೂಥ್‌ ಪೋಸ್ಟ್‌ನಲ್ಲಿ ಟ್ರಂಪ್‌, ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ವ್ಯವಹಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನಿನ ಎಲ್ಲಾ ವಿದ್ಯುತ್ ಉತ್ಪಾದನಾ ಸ್ಥಾವರಗಳು, ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸ್ಫೋಟಿಸಿ ಸಂಪೂರ್ಣವಾಗಿ ನಾಶಮಾಡುತ್ತೇನೆ ಎಂದು ಹೇಳಿದ್ದಾರೆ. ಇರಾನ್‌ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಆಡಳಿತ ಗಂಭೀರ ಚರ್ಚೆ ನಡೆಸುತ್ತಿದೆ. ಶೀಘ್ರದಲ್ಲೇ ಒಪ್ಪಂದಕ್ಕೆ ಬರದಿದ್ದರೆ ಇರಾನಿನ ಮೂಲಸೌಕರ್ಯ ಘಟಕಗಳನ್ನೇ ನಾಶ ಮಾಡುವುದಾಗಿ ಗುಡುಗಿದ್ದಾರೆ. ಇಲ್ಲಿಯವರೆಗೆ ನಾವು ಉದ್ದೇಶಪೂರ್ವಕವಾಗಿ ಇವುಗಳ ಮೇಲೆ ದಾಳಿ ನಡೆಸಿಲ್ಲ. ಇರಾನಿನ 47 ವರ್ಷಗಳ ಭಯೋತ್ಪಾದನಾ ಆಡಳಿತದಿಂದ ನಮ್ಮ ಸೈನಿಕರು ಮತ್ತು ಇತರರು ಮೃತಪಟ್ಟಿದ್ದಕ್ಕೆ ನಾವು ನಡೆಸುವ ಪ್ರತೀಕಾರದ ದಾಳಿ ಇದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!