ಉದಯವಾಹಿನಿ, ಹರಿಯಾಣ: ಹರಿಯಾಣದಲ್ಲಿ ಗುಂಪು ಘರ್ಷಣೆ ಮೃತರ ಸಂಖ್ಯೆ 5ಕ್ಕೆ ಏರಿಕೆ; ಪರಿಸ್ಥಿತಿ ಶಾಂತ ಗುರುಗ್ರಾಮ/ಚಂಡೀಗಢ: ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

