ಉದಯವಾಹಿನಿ, ಇಸ್ಲಾಮಾಬಾದ್: ಸ್ನಾನಗೃಹದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಾಜ್ವಾ ನಿಧನರಾಗಿದ್ದಾರೆ. 2026ರ ಫೆಬ್ರವರಿಯಲ್ಲಿ ಸ್ನಾನಗೃಹದಲ್ಲಿ ಜಾರಿಬಿದ್ದು ಬಜ್ವಾ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅಂದಿನಿಂದ ಅವರು ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯಲ್ಲಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಪಾಕಿಸ್ತಾನದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಜನರಲ್‌ಗಳಲ್ಲಿ ಒಬ್ಬರೆಂದು ಹೆಸರು ಪಡೆದಿದ್ದ ಬಜ್ವಾ ಸರ್ಕಾರ ಆಡಳಿತದ ವಿಚಾರದಲ್ಲೂ ಕೈ ಹಾಕುತ್ತಿದ್ದರು.
ನವೆಂಬರ್ 2016 ರಿಂದ ನವೆಂಬರ್ 2022 ರವರೆಗೆ ಅವರು ಸೇನಾ ಮುಖ್ಯಸ್ಥರಾಗಿದ್ದ ಬಜ್ವಾ ಅವಧಿಯಲ್ಲೇ ಭಾರತ ಬಾಲಕೋಟ್ ಮೇಲೆ ಏರ್‌ಸ್ಟ್ರೈಕ್ ಮಾಡಿತ್ತು. ಈ ಏರ್‌ಸ್ಟ್ರೈಕ್ ನಡೆದ ಬಳಿಕ ತಮ್ಮ ಸಾರ್ವಜನಿಕ ಭಾಷಣದಲ್ಲಿ ಭಾರತ ನಮ್ಮ ಮೊದಲ ಶತ್ರು ಎಂದು ಹೇಳಿದ್ದರು.
ನಿವೃತ್ತಿಯ ನಂತರ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಸಂಪನ್ಮೂಲ, ಇಂಧನ ಕೊರತೆಯಿಂದ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಮಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಒಪ್ಪಿಕೊಂಡಿದ್ದರು.
