ಉದಯವಾಹಿನಿ, ಧಾರವಾಡ: ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಗೃಹಿಣಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ರಾತ್ರಿ ನಡೆದಿದೆ.
ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಗೃಹಿಣಿಯೇ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಪೂರ್ಣಿಮಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ವಾನಿಸಲಾಗಿದೆ. ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಪೆಟ್ರೋಲ್‌ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ ಆವರಿಸಿದೆ.
