ಉದಯವಾಹಿನಿ, ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಗೆ ಸಲ್ಲಿಸಿದ್ದ ಒಟ್ಟು 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಆಕ್ಷೇಪಣೆ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ಪ್ರತಿದಿನ ಸುಮಾರು 1.74ಲಕ್ಷದಿಂದ 2 ಲಕ್ಷ ದೂರುಗಳ ಮೇಲೆ ಕ್ರಮವಹಿಸಲಾಗುತ್ತಿದೆ. ಏಪ್ರಿಲ್ 7ರೊಳಗೆ ಎಲ್ಲಾ ಆಕ್ಷೇಪಣೆಗಳ ನಿರ್ಣಯವನ್ನು ಪೂರ್ಣಗೊಳಿಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಭರವಸೆ ನೀಡಿದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಮಮತಾ ಬ್ಯಾನರ್ಜಿ ಪರ ವಕೀಲರು ಹಾಜರಾಗಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವುದರ ಪ್ರಮಾಣ ಸುಮಾರು 45% ತಲುಪಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್, ಟ್ರಿಬ್ಯುನಲ್‌ಗಳು ತಮ್ಮ ಕೆಲಸವನ್ನು ಮುಕ್ತವಾಗಿ ಮುಂದುವರಿಸಲಿ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು ಅಥವಾ ತೆಗೆಯುವುದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಟ್ರಿಬ್ಯುನಲ್‌ಗಳು ನಿರ್ಣಯಿಸಲಿ ಎಂದು ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!