ಉದಯವಾಹಿನಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಸುದ್ದಿ ಹೊರಬಿದ್ದಿದೆ.
ಸಾವಿನ ನಿಖರ ಕಾರಣವನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸದಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಜೈಶ್‌ಗೆ ಸಂಬಂಧಿಸಿದ ಮೂಲಗಳ ಪ್ರಕಾರ, ಅನ್ವರ್ ಅಂತ್ಯಕ್ರಿಯೆಯನ್ನು ಸೋಮವಾರ ರಾತ್ರಿ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
