ಉದಯವಾಹಿನಿ, ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದೆ. ಈಗಾಗಲೇ ಅರಣ್ಯ ಪ್ರದೇಶದಲ್ಲಿ ಒಪ್ಪಿಗೆ ಇಲ್ಲದೇ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುಬೇಕು. ಕಾಮಗಾರಿ ನಡೆಸಿದ ಸ್ಥಳದ ಮೌಲ್ಯದ ಆರು ಪಟ್ಟು ಮೌಲ್ಯವನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಪರಿಸರ ಸಂರಕ್ಷಣೆ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು ಎಂದು ಕೇಂದ್ರ ಹೇಳಿದೆ.
ಅರಣ್ಯ ಭೂಮಿಯ ಪ್ರಮಾಣಕ್ಕೆ ಸಮನಾಗಿ ಅರಣ್ಯೇತರ ಭೂಮಿಯಲ್ಲಿ ಬೆಳೆಸಬೇಕು. ಪರಿಹಾರ ಅರಣ್ಯೀಕರಣಕ್ಕಾಗಿ ಗುರುತಿಸಲಾದ ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಬೇಕು, ಅದರ ವಿವರಗಳನ್ನು ಸಲ್ಲಿಸಬೇಕು.

Leave a Reply

Your email address will not be published. Required fields are marked *

error: Content is protected !!