ಉದಯವಾಹಿನಿ, ಎಲ್‌ಪಿಜಿ ಸಿಲಿಂಡರ್ (LPG Cylinder) ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದೆ.
ಪ್ರಸ್ತುತ ಕೇವಲ 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿ ನಡೆಸುತ್ತಿವೆ. ಇದು ಪರಿಸ್ಥಿತಿಯನ್ನು ನಿಭಾಯಿಸಲು ಸಾಕಾಗುತ್ತಿಲ್ಲ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು ತಕ್ಷಣವೇ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಪೆಟ್ರೋಲಿಯಂ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಬರೆದಿರುವ ಪತ್ರದಲ್ಲಿ, ಕೆಲವು ಪ್ರದೇಶಗಳಲ್ಲಿ ಇನ್ನೂ ತಪ್ಪು ಮಾಹಿತಿಗಳು ಹರಡುತ್ತಿವೆ ಎಂದು ತಿಳಿಸಲಾಗಿದೆ. ಇದರಿಂದ ಜನರಲ್ಲಿ ಅನಗತ್ಯ ಭಯ ಉಂಟಾಗುತ್ತಿದ್ದು, ಹಲವು ಕಡೆಗಳಲ್ಲಿ ಆತಂಕದಿಂದ ಅತಿಯಾದ ಖರೀದಿ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸರಿಯಾದ ಮತ್ತು ಸಮಯಕ್ಕೆ ಸರಿಯಾಗಿ ಮಾಹಿತಿ ನೀಡುವುದು. ಎಲ್‌ಪಿಜಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಮತ್ತು ವಿತರಣಾ ವ್ಯವಸ್ಥೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜನರಲ್ಲಿ ವಿಶ್ವಾಸ ಮೂಡಿಸುವುದು. ಬ್ಲ್ಯಾಕ್ ಮಾರ್ಕೇಟ್ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!