ಉದಯವಾಹಿನಿ, ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.
ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು.
ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.
ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.
ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗೆ POCSO ಕಾಯಿದೆಯ ವಿಧಿ-ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.
ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು.
