ಉದಯವಾಹಿನಿ, ದಿಸ್ಪುರ: ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ. ಇದರಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (ತಿಳಿಸಿದ್ದಾರೆ.
ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ದುಧ್‌ನೋಯ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ನುಸುಳುಕೋರರು ನಾಲ್ಕು ಬಾರಿ ಮದುವೆಯಾಗಲು ಸಾಧ್ಯವಾಗುವುದಿಲ್ಲ ಎಂಬುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬುಡಕಟ್ಟು ಅಭಿವೃದ್ಧಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಇದರ ಸಂಪೂರ್ಣ ಅನುಷ್ಠಾನವು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.

ಪ್ರಧಾನಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಒಂದು ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಜಾರಿಗೆ ತರಲು ಬಿಜೆಪಿಗೆ ಮತ ಹಾಕಿ ಎಂದು ಜನತೆಗೆ ಮನವಿ ಮಾಡಿದ್ದಾರೆ.
ಮೋದಿ ಅವರ ನಾಯಕತ್ವದಲ್ಲಿ ದೇಶವು ತನ್ನ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯನ್ನು ಪಡೆದುಕೊಂಡಿತು. ಕಾಂಗ್ರೆಸ್ ಎಂದಿಗೂ ಆದಿವಾಸಿ ಮಹಿಳೆಯನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಲಿಲ್ಲ. ಆದರೆ, ಮೋದಿ ಅದನ್ನು ಬದಲಾಯಿಸಿದರು. ದ್ರೌಪದಿ ಮುರ್ಮು ರಾಷ್ಟ್ರದ ಪ್ರಥಮ ಪ್ರಜೆಯಾದರು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!