ಉದಯವಾಹಿನಿ, ಮಾಸ್ಕೋ : ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಪೂರ್ಣಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ ರಷ್ಯಾದಿಂದ ತೈಲ ಖರೀದಿಯನ್ನ ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಭಾರತ ಸುಮಾರು 6 ಕೋಟಿ ಬ್ಯಾರಲ್ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ. ಇದರ ಮಧ್ಯೆ ಆಪತ್ಭಾಂದವ ರಷ್ಯಾ ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ಭರವಸೆ ನೀಡಿದೆ.
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಇಂಧನ ಬಿಕ್ಕಟ್ಟು ಇನ್ನಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ ತ್ತು ಎಲ್‌ಎನ್‌ಜಿ ದ್ರವೀಕೃತ ನೈಸರ್ಗಿಕ ಅನಿಲ ( ಪೂರೈಕೆಯನ್ನು ಹೆಚ್ಚಿಸಬಹುದು. ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ರಷ್ಯಾ ಹೇಳಿದೆ.
ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ರಷ್ಯಾದ ಉಪಾಧ್ಯಕ್ಷ ಡೆನಿಸ್ ಮಾಂಟುರೊವ್, ಭಾರತದಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ರಷ್ಯಾದ ಕಂಪನಿಗಳು ಇಂಧನ ರಫ್ತುಗಳನ್ನು ಸ್ಥಿರವಾಗಿ ಹೆಚ್ಚಿಸುವ ಸಾಮರ್ಥ್ಯ ಹೊಂದಿವೆ ಎಂದು ತಿಳಿಸಿದ್ದಾರೆ.
ಇನ್ನೂ ಭಾರತದಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಹೇಳಿಕೆಯ ಪ್ರಕಾರ, 2025 ರ ಅಂತ್ಯದ ವೇಳೆಗೆ ರಷ್ಯಾ ಭಾರತಕ್ಕೆ ಖನಿಜ ರಸಗೊಬ್ಬರಗಳ ಪೂರೈಕೆಯನ್ನು ಶೇ.40 ರಷ್ಟು ಹೆಚ್ಚಿಸಿದೆ. ಅದರಂತೆ ಭಾರತದ ಅವಶ್ಯಕತೆ ಪೂರೈಸುವುದನ್ನು ಮುಂದುವರಿಸಲು ಮಾಸ್ಕೋ ಸಿದ್ಧವಾಗಿದೆ ಎಂದು ಮಾಂಟುರೊವ್ ಹೇಳಿದ್ದಾರೆ.
