
ಉದಯವಾಹಿನಿ, ಕೋಲ್ಕತ್ತಾ: ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯವು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕಿಳಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಸಿಕ್ಸರ್, ಬೌಂಡರಿ ಮಳೆ ಸುರಿಸಿದರು. ಆದ್ರೆ ಈ ಪಂದ್ಯದಲ್ಲಿ 228.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಸ್ ಬೀಸಿ 48 ರನ್ ಗಳಿಸಿದ್ರೂ, ಆರಂಭಿಕ ಆಟಗಾರ ಅಭಿಷೇಕ್ ಶರ್ಮಾಗೆ ಬಿಸಿಸಿಐ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದೆ.
ಹೌದು. ರಾತ್ರಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಎಸ್‌ಆರ್‌ಹೆಚ್ ತಂಡದ ಆಲ್‌ರೌಂಡರ್ ಅಭಿಷೇಕ್ ಶರ್ಮಾ ಬಿಸಿಸಿಐ ನಿಂದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕಾಗಿ ಅಭಿಗೆ ಬಿಸಿಸಿಐ, ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಹಾಗೂ 1 ಡಿಮೆರಿಟ್ ಪಾಯಿಂಟ್ ಅನ್ನು ಕೂಡ ಸಂಗ್ರಹಿಸಿದೆ. ಆರಂಭಿಕನಾಗಿ ಕಣಕ್ಕಿಳಿದ ಅಭಿ 228.57 ಸ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿ 48 ರನ್ (4 ಸಿಕ್ಸರ್, 4 ಬೌಂಡರಿ) ಚಚ್ಚಿದ್ದರು. 9ನೇ ಓವರ್‌ನ ನೇ ಎಸೆತದಲ್ಲಿ ಬ್ಲೆಸ್ಸಿಂಗ್ ಮುಜರಬಾನಿ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿದ ಅಭಿಷೇಕ್ ಶರ್ಮಾ, ಕ್ಯಾಚ್ ನೀಡಿ ಔಟಾದರು. ಈ ವೇಳೆ ಆಕ್ಷೇಪಾರ್ಹ ಪದಬಳಕೆ ಮಾಡುವ ಮೂಲಕ ಆರ್ಟಿಕಲ್ 2.3 ಅನ್ನು ಉಲ್ಲಂಘಿಸಿದ್ದಾರೆಂದು ಮ್ಯಾಚ್ ರೆಫರಿ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಅಭಿಷೇಕ್ ಶರ್ಮಾಗೆ ಬಿಸಿಸಿಐ ದಂಡ ವಿಧಿಸಿದೆ.
