ಉದಯವಾಹಿನಿ, ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್ ಅವರ ಗನ್ ಮ್ಯಾನ್ ಮೇಲೂ ಹಲ್ಲೆ ನಡೆಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಶಶಿ ತರೂರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಪಿ ಅನಿಲ್ ಕುಮಾರ್ (AP Anil Kumar) ಪರ ಪ್ರಚಾರಕ್ಕಾಗಿ ವಂಡೂರಿಗೆ ಬಂದಿದ್ದರು. ಅಲ್ಲಿಗೆ ಬೈಕ್‌ಗಳಲ್ಲಿ ಬಂದ ಜನರ ಗುಂಪೊಂದು ಬೆಂಗಾವಲು ವಾಹನ ತಡೆದು, ಶಶಿ ತರೂರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಗನ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಗನ್ ಮ್ಯಾನ್ ಸ್ವತಃ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
