
ಉದಯವಾಹಿನಿ , ಕೆ.ಆರ್.ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ, ಶ್ರದ್ದೆ, ಪರಿಶ್ರಮದಿಂದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ನಿರ್ವಹಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಬೇಕು ಎಂದು ಕಾಲೇಜು ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಶೀಳನೆರೆ ಹೋಬಳಿಯ ಸಿಂಧಘಟ್ಟ ಗ್ರಾಮದ ಸ.ಪ.ಪೂ ಕಾಲೇಜಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಳೆಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು.ನಾನೂ ಸಹ ಈ ಶಾಲೆಯ ಹಳೆಯ ವಿದ್ಯಾರ್ಥಿಗಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ಈ ಶಾಲೆ ಬಹಳ ವರ್ಷಗಳಿಂದ ಸಾವಿರಾರು ಸಂಖ್ಯೆಯ ಉತ್ತಮ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ನನ್ನ ಬಾಲ್ಯ ಜೀವನದಲ್ಲಿ ಓದಿದ ಹಳೆಯ ನೆನಪುಗಳು ಮರುಕಳಿಸುತ್ತಿವೆ. ನಮಗೆ ಆಗ ಬಸ್ ವ್ಯವಸ್ಥೆ ಇರಲಿಲ್ಲ ಆಗ ೪-೫ಕಿಮೀ ನಡೆದುಕೊಂಡು ಬರುತ್ತಿದ್ದೆವು. ಆದರೆ ಇಂದು ಎಲ್ಲಾ ಸೌಲಭ್ಯಗಳಿವೆ ಅದನ್ನು ಉಪಯೋಗಿಸಿಕೊಂಡು ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಹಾಗೂ ಪೋಷಕರಿಗೆ ಕೀರ್ತಿ ತರುವ ಕೆಲಸ ಮಾಡಬೇಕು. ಪೋಷಕರು ಮಕ್ಕಳ ಆಸಕ್ತಿಯನ್ನು ಅರಿತು ಅವರಿಗೆ ಉತ್ಸಾಹ ತುಂಬುವ ಕೆಲಸ ಮಾಡಬೇಕು. ನಾನು ಸರ್ಕಾರಿ ನೌಕರಿಯನ್ಮು ಬಿಟ್ಟು ಸಾರ್ವಜನಿಕ ಸೇವೆ ಮಾಡಬೇಕು ಎಂಬ ಉತ್ಸಾಹದಿಂದ ಸಾರ್ವಜನಿಕ ಬದುಕಿಗೆ ಬಂದು ಸೇವೆ ಮಾಡುತ್ತಿದ್ದೇನೆ. ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ವ್ಯಾಸಂಗ ಮಾಡಲು ಯಾವಾಗಲೂ ನನ್ನ ಸಹಕಾರ ಇದೆ. ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಶ್ರಮಿಸಬೇಕಿದೆ ಎಂದರು.
ಪ್ರಾAಶುಪಾಲ ಮಂಜೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದರೆ ಸಾಲದು ಸಾಂಸ್ಕೃತಿಕವಾಗಿಯೂ ವಿವಿಧ ವಿಭಾಗಗಳಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕೆಪಿಎಸ್ ಶಾಲೆಯ ಉಪಪ್ರಾಂಶುಪಾಲ ಹೆಚ್.ವಿ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಸಮಿತಿ ಉಪಾದ್ಯಕ್ಷ ಸುರೇಶ್, ಎಸ್‌ಡಿಎಂಸಿ ಅಧ್ಯಕ್ಷ ಫಯಾಜ್‌ಪಾಷ, ಪ್ರೌಢಶಾಲಾ ಮುಖ್ಯ ಶಿಕ್ಚಕ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ಹಿರಿಯ ಉಪಾದ್ಯಕ್ಷ ಆನಂದ್‌ಕುಮಾರ್, ಉಪನ್ಯಾಸಕರಾದ ಪ್ರಭುಸ್ವಾಮಿ, ಶಿವಕುಮಾರ್, ರಾಧ, ಮಂಜುಮಲ್ಲೇಶ್, ಈಶ್ವರಾಚಾರ್, ಸುರೇಶ್, ಸ್ಮಿತ ಪುನೀತ್, ಗ್ರಾಮ ಪಂಚಾಯತಿ ಸದಸ್ಯ ಕುಮಾರ್, ಸೋಮಣ್ಣ ಸೇರಿದಂತೆ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
