
ಉದಯವಾಹಿನಿ, ಟೆಹ್ರಾನ್: ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರೆದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ.
ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಟ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಮೂಲಗಳ ಪ್ರಕಾರ ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು.
