ಉದಯವಾಹಿನಿ, ನವದೆಹಲಿ: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 163 ರನ್ ಟಾರ್ಗೆಟ್ ನೀಡಿತು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಜಯ ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಕೇವಲ 1 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ರನೌಟ್ ಆದರು. ಕೇವಲ 7 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ತಂಡ ಆಘಾತಕ್ಕೊಳಗಾಗಿತ್ತು. ಈ ವೇಳೆ, ಪಾತುಮ್ ನಿಸ್ಸಾಂಕ 30 ಎಸೆತಗಳಿಗೆ 4 ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿ ಒಟ್ಟು 44 ರನ್ ಕಲೆಹಾಕಿ, ತಂಡಕ್ಕೆ ಚೇತರಿಗೆ ನೀಡಿತು. ಸಮೀರ್ ರಿಜ್ವಿ 51 ಬಾಲ್‌ಗೆ 90 ರನ್ ಗಳಿಸಿ (7 ಫೋರ್ ಮತ್ತು 7 ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಮೀರ್ ರಿಜ್ವಿ ಹಾಗೂ ನಿಸ್ಸಾಂಕ ಜೊತೆಯಾಟವಾಡಿ 66 ರನ್ ಗಳಿಸಿದರು. ಬಳಿಕ ಮಿಲ್ಲರ್ ಹಾಗೂ ರಿಜ್ವಿ 78 ರನ್‌ಗಳ ಜೊತೆಯಾಟವಾಡಿದರು.
ಇದಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ಫೀಲ್ಡಿಗಿಳಿದರು. ರಿಯಾನ್ ರಿಕಲ್ಟನ್ 9 ರನ್ ಗಳಿಸಿ ಔಟಾದರು. ಬಳಿಕ ಬಂದ ಯುವ ಬ್ಯಾಟರ್ ತಿಲಕ್ ವರ್ಮಾ ಯಾವುದೇ ರನ್ ಗಳಿಸದೇ ಪೆವಿಲಿಯನ್‌ಗೆ ಮರಳಿದರು. ಬಳಿಕ ತಂಡದ ನಾಯಕ ಸೂರ್ಯಕುಮಾರ್ ಯಾದವ್ 3 ಬೌಂಡರಿ ಹಾಗೂ 2 ಸಿಕ್ಸ್ ಬಾರಿಸಿ 36 ಎಸೆತಗಳಿಗೆ 51 ರನ್ ಗಳಿಸಿದರು. ರೋಹಿತ್ ಶರ್ಮಾ 26 ಬಾಲ್‌ಗಳಿಗೆ 5 ಫೋರ್, 1 ಸಿಕ್ಸ್ ಸಿಡಿಸಿ 35 ರನ್ ಗಳಿಸಿದರು. ಕೊನೆಯಲ್ಲಿ ನಮನ್ ಧರ್ 28 ರನ್ ಹಾಗೂ ಮಿಚೆಲ್ ಸ್ಯಾಂಟ್ನರ್ 18 ರನ್ ಗಳಿಸುವ ಮೂಲಕ ತಂಡದ ಮೊತ್ತ 160ರ ಗಡಿ ದಾಟಿಸಿದರು.
