
ಉದಯವಾಹಿನಿ ಪಾವಗಡ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್.ಸಿ, ಎಸ್.ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನದ ಪೈಕಿ 11 ಸಾವಿರ ಕೋಟಿ ದುರ್ಬಳಕೆ ಮಾಡಿ, ಎಸ್.ಸಿ, ಎಸ್.ಟಿ ಸಮುದಾಯಕ್ಕೆ ದ್ರೋಹ ಮಾಡುತ್ತಿದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈ ಬಿಟ್ಟು ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಎಸ್.ಸಿ, ಎಸ್.ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬಳಕೆ ಮಾಡಬೇಕೆಂದು ಒತ್ತಾಯಿಸಿ ಮಂಗಳವಾರ ದಲಿತ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಜಿತ್ ಕುಮಾರ್ ಬಿ.ಓ. ಬಿ.ಎಸ್.ಪಿ ತಾಲ್ಲೂಕು ಅಧ್ಯಕ್ಷ ಟಿ.ಹನುಮಂತರಾಯ, ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಉಪಾಧ್ಯಕ್ಷ ವಳ್ಳೂರು ನಾಗೇಶ್, ದಲಿತ ಮುಖಂಡರಾದ ಕೆ.ಈರಣ್ಣ, ಸೌಮ್ಯ ಬಿ.ಟಿ. ಲಾವಣ್ಯ ಮತ್ತಿತರರು ಇದ್ದರು.
