ಉದಯವಾಹಿನಿ, ಅಹಮದಾಬಾದ್: 275 ಜನರ ಸಾವಿಗೆ ಕಾರಣವಾದ ಏರ್‌ ಇಂಡಿಯಾ ವಿಮಾನ ದುರಂತ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಘಟನೆ ಸಂಭವಿಸಿದ ಸುಮಾರು 10 ತಿಂಗಳ ಬಳಿಕ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್ (ಬ್ಲ್ಯಾಕ್‌ ಬಾಕ್ಸ್‌) ಮಾಹಿತಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸಂತ್ರಸ್ತ ಕುಟುಂಬಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
2025ರ ಜೂ.12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಿಂದ ಹಾರಿದ್ದ ಏರ್ ಇಂಡಿಯಾ ವಿಮಾನ (AI 171, ಬೋಯಿಂಗ್ 787-8 ವಿಮಾನವು) ದುರಂತದಲ್ಲಿ ಸ್ಥಳೀಯರು ಸೇರಿ 275 ಜನರ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು. ಇದೀಗ ಇದರ ದತ್ತಾಂಶ ಬಿಡುಗಡೆಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!