ಉದಯವಾಹಿನಿ, ಚಂಡೀಗಢ: ಇಲ್ಲಿನ ಬಿಜೆಪಿ (BJP) ಪ್ರಧಾನ ಕಚೇರಿಯ ಹೊರಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.ಪ್ರಕರಣದಲ್ಲಿ ಭಾಗಿಯಾಗಿರುವ ಐದು ಜನರನ್ನು ಬಂಧಿಸಲಾಗಿದೆ. ಈ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ದುಷ್ಕರ್ಮಿಗಳನ್ನು ಗುರುತಿಸಲಾಗಿದೆ. ಇದುವರೆಗೆ ಒಂದು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮಾಡ್ಯೂಲ್ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಬೆಂಬಲಿತವಾಗಿದೆ ಎಂದು ತಿಳಿದುಬಂದಿದೆ. ಪೋರ್ಚುಗಲ್ ಮತ್ತು ಜರ್ಮನಿಯಲ್ಲಿ ವಿದೇಶಿ ಮೂಲದ ನಿರ್ವಾಹಕರನ್ನು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಆರೋಪಿಗಳ ಬಂಧನದಿಂದ ಈ ಪ್ರದೇಶದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸುವ ಭಯೋತ್ಪಾದಕ ಪಿತೂರಿಯನ್ನು ಪರಿಣಾಮಕಾರಿಯಾಗಿ ವಿಫಲಗೊಳಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ಮುಂದುವರೆದಿದೆ.
